HomeIndia NewsChenab Bridge Inauguration: ವಿಶ್ವದ ಅತ್ಯಂತ ಎತ್ತರದ ಚೆನಾಬ್ ಸೇತುವೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ..!

Chenab Bridge Inauguration: ವಿಶ್ವದ ಅತ್ಯಂತ ಎತ್ತರದ ಚೆನಾಬ್ ಸೇತುವೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ..!

For Dai;y Updates Join Our whatsapp Group

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ನಾಬ್ ಸೇತುವೆಯ ಮೇಲೆ ಮೊದಲ ಬಾರಿಗೆ ರೈಲು ಓಡಲಿದೆ. ಇದರೊಂದಿಗೆ, ಕಾಶ್ಮೀರವನ್ನು ಭಾರತೀಯ ರೈಲು ಜಾಲಕ್ಕೆ ಸಂಪರ್ಕಿಸುವ 127 ವರ್ಷಗಳ ಹಳೆಯ ಕನಸು ನನಸಾಗಿದೆ.

ಹೌದು ರೈಲ್ವೆ ಸೇತುವೆಯ ಮೇಲೆ ಧ್ವಜಾರೋಹಣ ಮಾಡಿ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಪ್ರಧಾನಿ ರೈಲ್ವೆ ಸೇತುವೆಯ ಮೇಲೆ ಹಾದುಹೋದ ಕೋಚ್‌ನಲ್ಲಿ ಪ್ರಯಾಣಿಸಿದರು.

ಭಾರತೀಯ ರೈಲ್ವೆಯು ಚೆನಾಬ್ ರೈಲು ಸೇತುವೆಯನ್ನು ಬಹಳ ಮಹತ್ವಾಕಾಂಕ್ಷೆಯೊಂದಿಗೆ ನಿರ್ಮಿಸಿದೆ. ಈ ಸೇತುವೆಯು ಜಮ್ಮು ಮತ್ತು ಕಾಶ್ಮೀರದ ಜಮ್ಮು ವಿಭಾಗದ ರಿಯಾಸಿ ಜಿಲ್ಲೆಯ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಸಂಪರ್ಕಿಸಲು ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಲಿಂಕ್ ಯೋಜನೆಯ ಭಾಗವಾಗಿ ಚೆನಾಬ್ ಸೇತುವೆಯನ್ನು ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ಈ ಸೇತುವೆಯನ್ನು ರಾಷ್ಟ್ರಕ್ಕೆ ಅರ್ಪಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!