ಧಾರವಾಡ:- ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ಎದುರಾಗಿದ್ದು, ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದೆ. ಶಾಸಕ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಮತ್ತೆ ಜೈಲು ಸೇರುವ ಭೀತಿ ಎದುರಾಗಿದೆ.
ಘಟನೆ ವಿವರ:
ಧಾರವಾಡ ಜಿಲ್ಲಾ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದರು. ಬಳಿಕ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿ ಪ್ರಸ್ತುತ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಆದ್ರೆ, ಇದೀಗ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜೈಲು ಭೀತಿ ಶುರುವಾಗಿದೆ.