ಯುವತಿ ವಿಚಾರಕ್ಕೆ ಕಿರಿಕ್: ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ!

0
Spread the love

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಯುವತಿ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ. 24 ವರ್ಷದ ದರ್ಶನ್ ಕೊಲೆಯಾದ ಯುವಕ. ವೇಣುಗೋಪಾಲ್ ನಿಂದ ಈ ಕೊಲೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಎಸ್ಕೇಪ್ ಆಗಿದ್ದಾನೆ.

Advertisement

ಪಾರ್ಟಿಗೆಂದು ಬಂದಿದ್ದ ಸ್ನೇಹಿತರ ಮಧ್ಯೆ ಜಗಳ ಶುರುವಾಗಿದೆ. ಜಗಳದಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಮೇಲ್ನೋಟಕ್ಕೆ ಇಬ್ಬರು ಒಂದೇ ಹುಡುಗಿಯನ್ನ ಪ್ರೀತಿಸುತ್ತಿದ್ದರು ಎಂದು ಶಂಕಿಸಲಾಗಿದೆ. ಇದೇ ವಿಚಾರಕ್ಕೆ ಗಲಾಟೆ ನಡೆದು ಈ ಅನಾಹುತ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here