HomeIndia News2026ರಲ್ಲಿ 500 ರೂಪಾಯಿ ನೋಟುಗಳು ರದ್ದಾಗುತ್ತವೆಯೇ..? ಕೇಂದ್ರ ಸರ್ಕಾರ ಹೇಳಿದ್ದೇನು..?

2026ರಲ್ಲಿ 500 ರೂಪಾಯಿ ನೋಟುಗಳು ರದ್ದಾಗುತ್ತವೆಯೇ..? ಕೇಂದ್ರ ಸರ್ಕಾರ ಹೇಳಿದ್ದೇನು..?

For Dai;y Updates Join Our whatsapp Group

Spread the love

ನವದೆಹಲಿ: 500 ರೂಪಾಯಿ ನೋಟುಗಳ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಕೇಂದ್ರ ಸರ್ಕಾರ ಎಲ್ಲಾ500 ರೂಪಾಯಿ ನೋಟುಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ.

‘ಕ್ಯಾಪಿಟಲ್ ಟಿವಿ’ ಎಂಬ ಯೂಟ್ಯೂಬ್ ಚಾನೆಲ್ ಕೂಡ ಇದರ ಕುರಿತು ವೀಡಿಯೊವನ್ನು ಬಿಡುಗಡೆ ಮಾಡಿದೆ. ಮಾರ್ಚ್ 2026 ರ ವೇಳೆಗೆ 500 ರೂ. ನೋಟುಗಳು ಹೆಚ್ಚಾಗಿ ಕಣ್ಮರೆಯಾಗುತ್ತವೆ ಎಂದು ಹೇಳಲಾಗಿದೆ.

ಇದೀಗ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, 500 ರೂ. ನೋಟುಗಳನ್ನು ಸ್ಥಗಿತಗೊಳಿಸಲಾಗಿಲ್ಲ ಮತ್ತು ಅವು ಕಾನೂನುಬದ್ಧವಾಗಿ ಚಲಾವಣೆಯಲ್ಲಿ ಉಳಿಯಲಿವೆ ಎಂದು ಹೇಳಿದೆ. ಈ ಬಗ್ಗೆ ಭಾರತ ಸರ್ಕಾರದ ಅಧಿಕೃತ ಸತ್ಯ-ಪರಿಶೀಲನಾ ಸಂಸ್ಥೆ ಯಾಗಿರುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ)ನ ಸತ್ಯ ಪರಿಶೀಲನಾ ವಿಭಾಗವು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿ ಪೋಸ್ಟ್‌ ಮಾಡಿದೆ.

ನಾಗರಿಕರು ಈ ತಪ್ಪು ಮಾಹಿತಿಗೆ ಬಲಿಯಾಗಬಾರದು ಎಂದು ಅದು ಜನರಿಗೆ ಸಲಹೆ ನೀಡಿದೆ. ಯಾವುದೇ ಸುದ್ದಿಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಯಾವಾಗಲೂ ಅಧಿಕೃತ ಮೂಲಗಳಿಂದ ಬಂದ ಸುದ್ದಿಗಳನ್ನು ಪರಿಶೀಲಿಸಿ ಎಂದು ಪಿಐಬಿ ಹೇಳಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!