ಬೆಂಗಳೂರು: ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿಯಲ್ಲಿ ಬುಧುವಾರ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕಮಿಷನರ್ ಸೇರಿ 5 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
Advertisement
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕೆಲ್ ಕುನ್ಹಾ ಆಯೋಗಕ್ಕೆ ಪ್ರಕರಣದ ಪರಿಶೀಲನೆ ಜವಾಬ್ದಾರಿ ನೀಡಲಾಗಿದ್ದು, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸದ್ಯ ಜಸ್ಟೀಸ್ ಮೈಕೆಲ್ ಕುನ್ಹಾ ಆಯೋಗವು ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ಮಾಡುತ್ತಿದೆ.
ಆದರೆ ಅದಕ್ಕೂ ಮೊದಲು ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ. ಬಳಿಕ ಚಾಮರಾಜನಗರ ಆಕ್ಸಿಜನ್ ದುರಂತದ ಕೇಸ್ ಪರಿಶೀಲನೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ಕುನ್ಹಾ ಆಯೋಗದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.