ನವದೆಹಲಿ: ಬಿಜೆಪಿ ಐದು ಹಂತದ ಮ್ಯಾಚ್ ಫಿಕ್ಸಿಂಗ್ ಮಾದರಿಯನ್ನು ಬಳಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು ಮತ್ತೆ ಎನ್ಡಿಎ ನೇತೃತ್ವದ ಬಿಜೆಪಿ ಚುನಾವಣಾ ಅಕ್ರಮಗಳಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಐದು ಹಂತದ ಮ್ಯಾಚ್ ಫಿಕ್ಸಿಂಗ್ ಮಾದರಿಯನ್ನು ಬಳಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ಗೆ ಬರೆದ ಲೇಖನದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.
ಕಳೆದ ವರ್ಷ ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ. ಇದು ಬಿಹಾರಕ್ಕೂ ಬರಬಹುದು. ಈ ರೀತಿ ಮ್ಯಾಚ್ ಫಿಕ್ಸಿಂಗ್ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ನಾನು ಸಣ್ಣ ಪ್ರಮಾಣದ ವಂಚನೆಯ ಬಗ್ಗೆ ಮಾತನಾಡುತ್ತಿಲ್ಲ, ಆದರೆ ನಮ್ಮ ರಾಷ್ಟ್ರೀಯ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಕೈಗಾರಿಕಾ ಪ್ರಮಾಣದ ರಿಗ್ಗಿಂಗ್ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಈ ಲೇಖನದಲ್ಲಿ ಹೇಳಿದ್ದಾರೆ. ಈ ಲೇಖನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 2023 ರಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯ ಮೂಲಕ ತಂದ ಬದಲಾವಣೆಗಳ ಮೇಲೆ ಕೇಂದ್ರಿಕರಿಸಲಾಗಿದೆ.
ಈ ಕಾಯ್ದೆಯು ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ತೆಗೆದು ಹಾಕಿ, ಕೇಂದ್ರ ಸಚಿವರನ್ನು ಇದಕ್ಕೆ ನೇಮಿಸಲಾಗಿದೆ. ಇದು ಕಾರ್ಯಾಂಗಕ್ಕೆ ನೀಡಿದ ದೊಡ್ಡ ಪೆಟ್ಟು ಎಂದು ಹೇಳಿದ್ದಾರೆ.