ಬೆಂಗಳೂರು :- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕುಟುಂಬದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಬಿಎಸ್ ಯಡಿಯೂರಪ್ಪ ಮೊಮ್ಮಗ, ಬಿವೈ ರಾಘವೇಂದ್ರ ಪುತ್ರ ಸುಭಾಷ್ ನಾಳೆ ಅಂದ್ರೆ ಬಾನುವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಅದಕ್ಕೂ ಮುನ್ನ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಸುಭಾಷ್ ಹಾಗೂ ಶ್ರಾವಣಾ ಆರತಕ್ಷತೆ ಸಮಾರಂಭದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು.
ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್‌ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಭಾನುವಾರ ವರಿಸಲಿದ್ದಾರೆ.