ಕೋಲಾರ:- ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಮೂವರು ಸರಗಳ್ಳರನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕೋಲಾರದಲ್ಲಿ ಜರುಗಿದೆ. 39 ವರ್ಷದ ಶಶಿಧರ್, 25 ವರ್ಷದ ಹರ್ಷಿತ್, 24 ವರ್ಷದ ಸೂರ್ಯಪ್ರಕಾಶ್ ಬಂಧಿತರು.
Advertisement
ಕೋಲಾರ ನಗರ ಠಾಣೆ- ಬಂಗಾರಪೇಟೆ ಠಾಣೆಯ ಸರಹದ್ದಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 9 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.