ಕಾಲ್ತುಳಿತ ದುರಂತ: ಸಿದ್ದರಾಮಯ್ಯ, ಡಿಕಿಶಿಗೆ ಹೈಕಮಾಂಡ್ ಬುಲಾವ್: ನಾಳೆ ದೆಹಲಿಗೆ ಸಿಎಂ, ಡಿಸಿಎಂ

0
Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸ ಕಾಲ್ತುಳಿತದಿಂದ 11 ಸಾವನ್ನಪ್ಪಿದ್ರು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವು ಎಫ್ಐಆರ್ ದಾಖಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಇದರ ನಡುವೆ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೇಳಿದೆ.ಆದ್ದರಿಂದ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಲಿದ್ದಾರೆ.

ದೆಹಲಿಯಲ್ಲಿ ನಾಳೆ ರಾಹುಲ್ ಗಾಂಧಿ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಲಿದ್ದಾರೆ. ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಗ್ಗೆ ಗಂಭೀರವಾದಂತ ಚರ್ಚೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದ್ದು, ನಾಳೆ ದುರಂತದ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಮಾಹಿತಿ ಪಡೆಯಲಿದೆ.

 


Spread the love

LEAVE A REPLY

Please enter your comment!
Please enter your name here