ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ವಿಜಯನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಗಳಲ್ಲಿ ಜೂನ್ 11ರಿಂದ ಮತ್ತಷ್ಟು ಮಳೆ ಹೆಚ್ಚಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಚ್ಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.