ಟಿಕೆಟ್ ದರ ಏರಿಕೆ ಎಫೆಕ್ಟ್: ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ- ಜಾಹೀರಾತು ಮೊರೆ ಹೋದ BMRCL!

0
Spread the love

ಬೆಂಗಳೂರು :- ಇತ್ತೀಚೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಹೀಗಾಗಿ ಮೆಟ್ರೋ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದೀಗ BMRCL ಜಾಹೀರಾತು ಮೊರೆ ಹೋಗಿದೆ.

Advertisement

ಮೆಟ್ರೋ ಟಿಕೆಟ್ ಏರಿಕೆ ಆದ ಮೇಲೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಇದರಿಂದ ಮೆಟ್ರೋಗೆ ನಷ್ಟ ಉಂಟಾಗುತ್ತಿದೆ ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್​ಸಿಎಲ್​ ಜಾಹೀರಾತುಗಳ ಮೊರೆ ಹೋಗಿದ್ದು, ಮೆಟ್ರೋ ಒಳಗೆ ಮತ್ತು ಹೊರಗೆ ಬಣ್ಣ ಬಣ್ಣದ ಜಾಹೀರಾತುಗಳು ಕಾಣಿಸುತ್ತಿವೆ. ಆರ್ಥಿಕ ಹೊಡೆತದಿಂದ ಹೊರಬರಲು ಮೆಟ್ರೋ ಮುಂದಿರುವ ಆಯ್ಕೆ ಸದ್ಯ ಜಾಹೀರಾತು ಎಂಬಂತಾಗಿದೆ.

ಬಿಎಂಆರ್​​ಸಿಎಲ್​ನಲ್ಲಿ ಸದ್ಯ 57 ರೈಲು ಸಂಚಾರ ಮಾಡುತ್ತಿವೆ. ಈಗ ಒಟ್ಟು 57 ರೈಲುಗಳಲ್ಲೂ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗಿದ್ದು, ಈ ಪೈಕಿ ನೇರಳೆ ಮಾರ್ಗದ 33 ಹಾಗೂ ಹಸಿರು ಮಾರ್ಗದಲ್ಲಿ 24 ರೈಲುಗಳಿಗೆ ಜಾಹೀರಾತು ಅಳವಡಿಸಲಾಗುತ್ತಿದೆ. ಸಂಪೂರ್ಣ ರೈಲುಗಳಿಗೆ ಮೂಲ ಬಣ್ಣ ಹೊರತು ಪಡಿಸಿ ಜಾಹೀರಾತು ಹಾಕಲು ಪ್ಲ್ಯಾನ್​ ಮಾಡಲಾಗುತ್ತಿದೆ. ರೈಲುಗಳ ಒಳಭಾಗ ಮತ್ತು ಹೊರಭಾಗದಲ್ಲಿ ಇಲ್ಲಿಯವರೆಗೆ ಯಾವುದೇ ಜಾಹೀರಾತು ಇರಲಿಲ್ಲ. ಇನ್ಮುಂದೆ ಎಲ್ಲ ರೈಲುಗಳ ಒಳಭಾಗ ಹಾಗೂ ಹೊರಭಾಗದಲ್ಲಿ ಜಾಹೀರಾತು ಅಳವಡಿಸಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್​ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here