HomeKarnataka Newsಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್: ಬೆಂಗಳೂರು-ಬಳ್ಳಾರಿ-ವಿಜಯನಗರ ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

ಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್: ಬೆಂಗಳೂರು-ಬಳ್ಳಾರಿ-ವಿಜಯನಗರ ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!

For Dai;y Updates Join Our whatsapp Group

Spread the love

ಬಳ್ಳಾರಿ – ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂ ಬೆಳಗ್ಗೆ ಬಳ್ಳಾರಿಯ ಕಾಂಗ್ರೆಸ್ ನಾಯಕರಿಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್‌ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್‌ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

ಬಳ್ಳಾರಿ ಚುನಾವಣೆಗೆ 200 ರೂ. ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಮತದಾರರಿಗೆ 200 ರೂ.ನಂತೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

ಇಡಿ ದಾಳಿಗೆ ಒಳಗಾದ ಪ್ರಮುಖ ನಾಯಕರು:

ಬಳ್ಳಾರಿ ಲೋಕಸಭಾ ಸಂಸದ – ತುಕಾರಾಂ (ಸಂಡೂರು)

ಬಳ್ಳಾರಿ ನಗರ ಶಾಸಕ – ಭರತ್ ರೆಡ್ಡಿ
ಕೂಡ್ಲಿಗಿ – ಶಾಸಕ ಡಾ. ಶ್ರೀನಿವಾಸ

ಕಂಪ್ಲಿ ಶಾಸಕ – ಗಣೇಶ

ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ – ನಾಗೇಂದ್ರ

ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಬೆಂಗಳೂರಿನಲ್ಲಿಯೂ ಇಡಿ ದಾಳಿ ನಡೆದಿದೆ. ಶಾಸಕ ಬಿ ನಾಗೇಂದ್ರಗೆ ಸೇರಿದ ಎಲ್ ಹೆಚ್ ನ 360 ರೂಂ ನಂಬರ್ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ಮಾಡಿದ್ದಾರೆ. ಬೆಳ್ಳಂ ಬೆಳಗ್ಗೆಯೇ ದಾಳಿ ನಡೆಸಿದ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇಡಿ ದಾಳಿ ಸ್ಥಳಗಳ ವಿವರ:

* ಕಂಪ್ಲಿ ಮತ್ತು ಕುರುಗೋಡು ಶಾಸಕರಾದ ಗಣೇಶರ ನಿವಾಸದಲ್ಲಿ ಶೋಧ

* ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ ಅವರ ಮನೆ ಹಾಗೂ ಕಚೇರಿ ಪರಿಶೀಲನೆ

* ಬಳ್ಳಾರಿ ನಗರದ ಶಾಸಕರುಗಳಾದ ಭರತ್ ರೆಡ್ಡಿ ಮತ್ತು ನಾಗೇಂದ್ರ ಅವರ ಮನೆ ಮತ್ತು ಕಚೇರಿ ಪರಿಶೀಲನೆ

* ಸಂಡೂರಿನ ಸಂಸದ ತುಕಾರಾಂ ಅವರ ನಿವಾಸದಲ್ಲಿಯೂ ಶೋಧ ಕಾರ್ಯಾಚರಣೆ.

ಇಡಿ ಅಧಿಕಾರಿಗಳು ಮೊದಲು ಸ್ಥಳೀಯ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಹಕಾರದೊಂದಿಗೆ ದಾಳಿ ಆರಂಭಿಸಿದ್ದು, ಹಣಕಾಸು ದಾಖಲೆಗಳು, ಬ್ಯಾಂಕ್‌ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಮುಂಗಡವಾಗಿದ್ದ ಅನುದಾನಗಳ ದುರ್ಬಳಕೆ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಆರೋಪಗಳು ಕೇಳಿಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ತನಿಖಾ ಸಂಸ್ಥೆ ಈ ಕ್ರಮಕೈಗೊಂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!