ತುಮಕೂರು: ತುಮಕೂರು ಜಿಲ್ಲೆಯ ಹತ್ತು ತಾಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಇಲಾಖೆ ಆದೇಶದಂತೆ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತಿಪಟೂರು, ತುರುವೇಗೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್ ಕಚೇರಿಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ್ ನೇತೃತ್ವದ 10 ಇನ್ಸ್‌ಪೆಕ್ಟರ್ ತಂಡದಿಂದ 10 ತಾಲೂಕಿನಲ್ಲಿ ಕಾರ್ಯಚರಣೆ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಕೊರಟಗೆರೆ ಪಟ್ಟಣದ ಮಿನಿವಿಧಾನಸೌದ ಕಚೇರಿಗೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಇನ್ಸ್‌ಪೆಕ್ಟರ್ ನಿರ್ಮಲಾ ನೇತೃತ್ವದ ತಂಡದಿಂದ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೊರಟಗೆರೆ ಪಟ್ಟಣದ ತಹಶೀಲ್ದಾರ್ ಕಚೇರಿ, ಭೂದಾಖಲೆ ಕಚೇರಿ, ಭೂಮಾಪನಾ ಇಲಾಖೆ ಮತ್ತು ಉಪಖಜಾನೆ ಇಲಾಖೆಗಳ ಖಡತಗಳ ಪರಿಶೀಲನೆ ಮಾಡುತ್ತಿದ್ದು, ವಿಲೇವಾರಿ ಆಗದೇ ಇರುವ ಜನಸಾಮಾನ್ಯರ ಸಮಸ್ಯೆಗಳ ಖಡತಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಭೆ ನಡೆಸುತ್ತಿದ್ದಾರೆ. ಇದರಿಂದ ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.