ಬಳ್ಳಾರಿ:- ಸಂಸದ ತುಕಾರಾಂ ಅವರ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಕೊನೆಗೂ ಸಂಸದರನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಚುನಾವಣೆಗೆ 21 ಕೋಟಿ ಹಣವನ್ನು ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ ಅವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ. ಬಳ್ಳಾರಿ ಚುನಾವಣೆಗೆ 200 ರೂ. ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಈ ಶೋಧ ನಡೆದಿದೆ. ಬಳಿಕ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೂ ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆದಿದೆ.