Rain News: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ: ಎಲ್ಲೆಲ್ಲಿ?

0
Spread the love

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Advertisement

ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

LEAVE A REPLY

Please enter your comment!
Please enter your name here