HomeKarnataka Newsಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

For Dai;y Updates Join Our whatsapp Group

Spread the love

ಬೆಂಗಳೂರು: ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಸುಪ್ರೀಂ ಕೋರ್ಟ್​ ಅವರ ಜಾಮೀನನ್ನು ರದ್ದುಗೊಳಿಸಿದೆ.

ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಒಂದು ವಾರದ ಗಡುವು ಹಿನ್ನೆಲೆ ಶಾಸಕ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು.

 ವಿಚಾರಣೆ ಬಳಿಕ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು. ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್‌ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ.

ಎ9 ಆರೋಪಿ ಅಶ್ವಥ್ ಗೌಡನಿಂದ ಬೆದರಿಕೆ ಹಾಕಲಾಗಿದೆ. ಆರೋಪಿ ಬೆದರಿಕೆ ಹಾಕಿರುವುದಾಗಿ ಕೋರ್ಟ್‌ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!