ಸಿಸಿಬಿ-ಚಿಕ್ಕಜಾಲ ಪೊಲೀಸರ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆ ಅರೆಸ್ಟ್!

0
Spread the love

ಬೆಂಗಳೂರು:- ಸಿಸಿಬಿ ಹಾಗೂ ಚಿಕ್ಕಜಾಲ ಪೊಲೀಸರು ಕಾರ್ಯಾಚರಣೆ ನಡೆಸಿ 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಕಳೆದ 3 ವರ್ಷದ ಹಿಂದೆ ಬಂಧಿತ ಮಹಿಳೆಯು, ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದಳು. ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದಿದ್ದಳು. ನಂತರ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಪೆಡ್ಲಿಂಗ್‍ಗೆ ಇಳಿದಿದ್ದಳು.

ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಮಾದಕವಸ್ತು ಸಾಗಾಟ ಮಾಡಿದ್ದಳು. ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.


Spread the love

LEAVE A REPLY

Please enter your comment!
Please enter your name here