ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆಆರ್ ಪುರದ ಬಳಿ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಹಿನ್ನೆಲೆ ಮೂರು ತಿಂಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ಮಾಹಿತಿ ನೀಡಿದ್ದಾರೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:
ಬೆನ್ನಿಗಾನಹಳ್ಳಿ (ಸದಾನಂದನಗರ ಬ್ರಿಡ್ಜ್) ಕಡೆಯಿಂದ ಹಳೆ ಮದ್ರಾಸ್ ರಸ್ತೆಗೆ ಸೇರುವ ಕೋಕೊ ಕೋಲಾ ಗೋಡಾನ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು ಹೀಗಿವೆ:
* ಹಳೆ ಮದ್ರಾಸ್ ರಸ್ತೆ ಬೆನ್ನಿಗಾನಹಳ್ಳಿ ರೈಲ್ವೆ ಬ್ರಿಡ್ಜ್ ಕಡೆಯಿಂದ ಕಸ್ತೂರಿನಗರ ಕಡೆಗೆ ಹೋಗುವ ವಾಹನ ಸವಾರರು ಡಿಓಟಿ (DOT) ಬೈಪಾಸ್ ಹೆಬ್ಬಾಳ ಸಂಚರಿಸಬಹುದಾಗಿರುತ್ತದೆ. ಮೂಲಕ ಕಸ್ತೂರಿನಗರ ಕಡೆಗೆ ಸಂಚರಿಸುವುದು.
* ಕಸ್ತೂರಿನಗರ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಕಡೆಗೆ ಹೋಗುವ ವಾಹನ ಸವಾರರು, ಸದಾನಂದನಗರ ಕಡೆಯಿಂದ ಎನ್.ಜಿ.ಇ.ಎಫ್ ಸಿಗ್ನಲ್ ಮೂಲಕ ಹಳೆ ಮದ್ರಾಸ್ ರಸ್ತೆ ಕಡೆಗೆ ಸಂಚರಿಸಬಹುದು. ಹೀಗಾಗಿ ಸಂಚಾರ ಅಡಚಣೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಕೋರಿದ್ದಾರೆ.