ರಸ್ತೆ ಅಪಘಾತ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು!

0
Spread the love

ಹಾವೇರಿ:- ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಘಟನೆಯಿಂದ ಓರ್ವ ಗಂಭೀರ ಗಾಯಗೊಂಡಿದ್ದಾರೆ.

Advertisement

ಪ್ರವೀಣ (36) ಮೃತ ವ್ಯಕ್ತಿ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಕುಮಾರಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here