HomeKarnataka Newsಆಗುಂಬೆ ಘಾಟಿಯಲ್ಲಿ 'ಭಾರೀ ವಾಹನ'ಗಳ ಸಂಚಾರ ನಿಷೇಧ: ಶಿವಮೊಗ್ಗ ಡಿಸಿ ಆದೇಶ

ಆಗುಂಬೆ ಘಾಟಿಯಲ್ಲಿ ‘ಭಾರೀ ವಾಹನ’ಗಳ ಸಂಚಾರ ನಿಷೇಧ: ಶಿವಮೊಗ್ಗ ಡಿಸಿ ಆದೇಶ

For Dai;y Updates Join Our whatsapp Group

ಶಿವಮೊಗ್ಗ: ಜಿಲ್ಲೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಮಳೆಗಾಲದ ಹಿನ್ನಲೆಯಲ್ಲಿ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಸೂಚನೆ ಹೊರಡಿಸಿದ್ದು, ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ನೀಡಿದ್ದಾರೆ.

ಭಾರೀ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದು, ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img