ಹಾಸನ:- ನಗರದಲ್ಲಿ ಧಾರಕಾರ ಮಳೆ ಆಗುತ್ತಿರುವ ಹಿನ್ನೆಲೆ ಇಲ್ಲಿನ ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಇಲ್ಲಿನ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ಎಡಬಿಡದೆ ಧಾರಾಕಾರವಾಗಿ ಮಳೆಯಾಗುತ್ತಿದೆ.
ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಬಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡಕವಿದ ವಾತಾವರಣವಿದೆ. ಭಾನುವಾರದವರೆಗೂ 1,907 ಕ್ಯೂಸೆಕ್ ಒಳಹರಿವಿದ್ದು, ಇಂದು 4,642 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 6,549 ಕ್ಯೂಸೆಕ್ ನೀರು ಹರಿದು ಬರುತ್ತಿದೆ.



