ರಾಜ್ಯದಲ್ಲಿ ಮಳೆ ಅಬ್ಬರ: ಚಿಕ್ಕಮಗಳೂರಿನಲ್ಲಿ ಮರಬಿದ್ದು ವ್ಯಕ್ತಿ ಸಾವು..!

0
Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅದ್ರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ.
ಇದೀಗ ಬೈಕ್ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.

Advertisement

ಅನಿಲ್ ಪಾಯ್ಸ್ (55) ಮೃತ ದುರ್ಧೈವಿಯಾಗಿದ್ದು, ಮೃತ ಅನಿಲ್ ಬೈಕ್ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿಮಳೆಗೆ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು.
ವೇಳೆ ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here