ಹಾಸನ ಬೆನ್ನಲ್ಲೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಹೈ ಅಲರ್ಟ್!

0
Spread the love

ಬೆಂಗಳೂರು: ಬೆಳ್ಳಂ ಬೆಳಗ್ಗೆ ಹಾಸನದ ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇದೀಗ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

Advertisement

ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೊಲೀಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹೈದರಾಬಾದ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಾಸನದ ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ:

ಹಾಸನದ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಒಟ್ಟು 3 ಶಾಲೆಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬಂದಿದೆ. ಹಾಸನದ ವಿಜಯನಗರ ಇಂಡಸ್ಟ್ರಿಯಲ್ ಏರಿಯಾ, ಕೆಆರ್ ಪುರಂದಲ್ಲಿರುವ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್‌ ಶಾಲೆಗೆ ಇ-ಮೇಲ್ ಬಂದಿದೆ. 1 ಗಂಟೆಗೆ ಕಟ್ಟಡ ಸ್ಫೋಟಿಸುವುದಾಗಿ ದುಷ್ಕರ್ಮಿ ಸಂದೇಶ ಕಳುಹಿಸಿದ್ದಾನೆ.


Spread the love

LEAVE A REPLY

Please enter your comment!
Please enter your name here