ಮಹಾರಾಷ್ಟ್ರ: ರೈಲಿನಲ್ಲಿ ದಿಢೀರ್ ಬೆಂಕಿ ಅವಘಡ ಸಂಭವಿಸಿದ್ದು, ಜಸ್ಟ್ 30 ನಿಮಿಷದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಟ್ರೈನ್ನಲ್ಲಿರುವ ಟಾಯ್ಲೆಟ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅನಾಹುತ ಆಗಿದೆ ಎನ್ನಲಾಗುತ್ತಿದೆ. ರೈಲಿನಲ್ಲಿ ದಟ್ಟ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಪ್ರಯಾಣಿಕರು ಹೊಗೆಯನ್ನು ನೋಡಿ ಗಾಬರಿಯಿಂದ ರಕ್ಷಣೆಗಾಗಿ ಕಿರುಚಾಡಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ರೈಲು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 30 ನಿಮಿಷದೊಳಗೆ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಒಟ್ಟು ಮೂರು ಫೈರ್ ಎಂಜಿನ್ಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.