HomeKarnataka Newsವಿಮಾನ ದುರಂತ: ಬಿಜೆಪಿ, ಜನತಾದಳ ಹೆಣದ ಮೇಲೆ ರಾಜಕೀಯ ಮಾಡುತ್ತೆ - ಡಿಕೆ ಶಿವಕುಮಾರ್ ಕಿಡಿ

ವಿಮಾನ ದುರಂತ: ಬಿಜೆಪಿ, ಜನತಾದಳ ಹೆಣದ ಮೇಲೆ ರಾಜಕೀಯ ಮಾಡುತ್ತೆ – ಡಿಕೆ ಶಿವಕುಮಾರ್ ಕಿಡಿ

For Dai;y Updates Join Our whatsapp Group

ಬೆಂಗಳೂರು: ಬಿಜೆಪಿ, ಜನತಾದಳ ಹೆಣದ ಮೇಲೆ ರಾಜಕೀಯ ಮಾಡುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ.

ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀ. ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ದುರಂತದಿಂದ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿಸಿದೆವು. ಅಪಘಾತ ಕುರಿತು ಬ್ಲ್ಯಾಕ್ಬಾಕ್ಸ್ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು.

ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img