Rain News: ಕರ್ನಾಟಕದಲ್ಲಿ ಜೂ.23 ರವರೆಗೂ ಭಾರಿ ಮಳೆ; ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಜೂ. 23ರವರೆಗೂ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಮಳೆಯಾಗಲಿದೆ.

ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳಿಗೆ ರಜೆ ಘೋಷಣೆ!

ಉತ್ತರ ಕನ್ನಡ :- ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕುಮಟಾ,‌ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,‌ ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ.

ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here