CCB ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ!

0
Spread the love

ಬೆಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಚಿಕುವುಮಾ ಬಂಧಿತ ಆರೋಪಿಯಾಗಿದ್ದು,

Advertisement

ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಿದ್ದನು. ಪಕ್ಕಾ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಆರೋಪಿಯನ್ನ ಬಂಧಿಸಿ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.

2013 ರಿಂದಲೂ ಡ್ರಗ್ ಮಾಫಿಯಾದಲ್ಲಿ ಆ್ಯಕ್ಟೀವ್ ಆಗಿದ್ದ ಬಂಧಿತ ಆರೋಪಿಯೂ, ವಿದೇಶದಿಂದ ಡ್ರಗ್ ತರಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದನು. ಇನ್ನೂ ಆರೋಪಿಯಿಂದ 1.2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here