ಸಕ್ಕರೆನಾಡು ಮಂಡ್ಯದಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ: ಮಾಜಿ ಸಂಸದ ಸುಮಲತಾ ವಿರೋಧ!

0
Spread the love

ಮಂಡ್ಯ:- ಜಿಲ್ಲೆಯಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರದ ನಡೆಗೆ ಸೋಷಿಯಲ್‌ ಮೀಡಿಯಾ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ. ಇದು ಕೇವಲ ಒಂದು ಅಣೆಕಟ್ಟಲ್ಲ; ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸರ್ಕಾರಕ್ಕೆ ಮಾಜಿ ಸಂಸದೆ ಎಚ್ಚರಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here