ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ: BJP ಪ್ರೊಟೆಸ್ಟ್’ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ

0
Spread the love

ಬೆಂಗಳೂರು: ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿ ಬೃಹತ್ಪ್ರತಿಭಟನೆ ನಡೆಸಿದೆ. ಇನ್ನೂ ವಿಚಾರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ , ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ಇನ್ನೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ,

ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.

ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here