HomeKarnataka Newsಹಾಸನದಲ್ಲಿ ಧಾರಾಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

ಹಾಸನದಲ್ಲಿ ಧಾರಾಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

For Dai;y Updates Join Our whatsapp Group

Spread the love

ಹಾಸನ:– ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಇಂದು ಭಾರೀ ಪ್ರಮಾಣದಲ್ಲಿ ಒಳಹರಿವು ಹೆಚ್ಚಿದೆ. ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಂದೇ ದಿನದಲ್ಲಿ 11,270 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಸದ್ಯ ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವಿದೆ.

ಇಂದಿನ ನೀರಿನ ಮಟ್ಟ:

ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ

ಸದ್ಯ ಜಲಾಶಯದಲ್ಲಿರುವ ನೀರು – 27.714 ಟಿಎಂಸಿ

ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ – 2922.00 ಅಡಿ

ಇಂದಿನ ನೀರಿನ ಮಟ್ಟ – 2911.35 ಅಡಿ

ಒಳಹರಿವು – 19,546 ಕ್ಯೂಸೆಕ್

ಹೊರಹರಿವು – 1,040 ಕ್ಯೂಸೆಕ್

ಕೆಆರ್‌ ಪೇಟೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ:

ಕೆ.ಆರ್‌. ಪೇಟೆ: ಹೇಮಾವತಿ ನದಿ ಪಾತ್ರದಲ್ಲಿ ವರುಣನ ಆರ್ಭಟ ಜೋರಾಗಿದೆ. ಹಾಸನದ ಗೊರೂರು ಅಣೆಕಟ್ಟೆ ಭರ್ತಿಯಾಗುವ ಹಂತದಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್‌. ಪೇಟೆ ತಾಲೂಕಿನ ಮಂದಗೆರೆ ಹಾಗೂ ಬಂಡಿಹೊಳೆ ಬಳಿಯ ಹೇಮಗಿರಿ ಅಣೆಕಟ್ಟೆಗಳಲ್ಲಿ ನದಿಯು ಉಕ್ಕಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮ ತೆಗೆದುಕೊಂಡಿರುವ ತಾಲೂಕು ಆಡಳಿತವು ಪ್ರವಾಹದ ಎಚ್ಚರಿಕೆ ನೀಡಿದೆ. ಜನ ಜಾನುವಾರುಗಳನ್ನು ನದಿಗೆ ಇಳಿಸದಂತೆ ಮನವಿ ಮಾಡಿದೆ. ನದಿ ಪಾತ್ರ ಮತ್ತು ನದಿ ಪಕ್ಕದ ತಗ್ಗು ಪ್ರದೇಶದ ಜನ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಆದೇಶ ಹೊರಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!