BMRCL And Amul: ಡೂಪ್ಲಿಕೇಟ್‌ CM, DKS ನವರಂಗಿ ಆಟ ಬಯಲು: ರಾಜ್ಯ ಸರ್ಕಾರದ ವಿರುದ್ಧ JDS ವಾಗ್ದಾಳಿ

0
Spread the love

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದೆ. ನಗರದ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ತೆರೆಯಲು ಒಪ್ಪಂದ ನಡೆದಿದೆ. ಬಿಎಂಆರ್ಸಿಎಲ್ ನಡೆ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಅದಲ್ಲದೆ ಕುರಿತಾಗಿ ಜೆಡಿಎಸ್ಟ್ವೀಟ್ ಮಾಡಿದ್ದು, ಕಮಿಷನ್ಆಸೆಗೆ ಸ್ವಾಭಿಮಾನ ಮಾರಿಕೊಂಡ ಡಿಕೆ ಶಿವಕುಮಾರ್​! ಡೂಪ್ಲಿಕೇಟ್ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ. ಚುನಾವಣೆಗೂ ಮುಂಚೆ #SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆ ಶಿವಕುಮಾರ್​, ಕಮಿಷನ್ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ ಎಂದು ವಾಗ್ದಾಳಿ ಮಾಡಿದೆ.

ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗೆ ಅವಕಾಶ ನೀಡಲಾಗಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡ ಕಾಂಗ್ರೆಸ್​, ಅಧಿಕಾರಕ್ಕೆ ಬಂದ ಬಳಿಕ ನಂದಿನಿಯನ್ನು ಮರೆತು,

ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಮಾರುಕಟ್ಟೆ ಸೃಷ್ಟಿಸುವಲ್ಲಿ ಕಾಂಗ್ರೆಸ್ಸರ್ಕಾರ ವಿಫಲವಾಗಿದ್ದು, ಕನ್ನಡಿಗರ ಹೆಮ್ಮೆಯ ಬ್ರಾಂಡ್‌ “ನಂದಿನಿ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಕಿಡಿಕಾರಿದೆ.


Spread the love

LEAVE A REPLY

Please enter your comment!
Please enter your name here