ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಸಂಡೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ ವ್ಯಕ್ತಿಯಾಗಿದ್ದು, ಸಂಡೂರಿನಲ್ಲಿ ಮುಂಬೈ ಪೊಲೀಸರಿಂದ ಬಂಧಿಸಲಾಗಿದೆ.
ದೆಹಲಿಯ ಕಂಪ್ಯೂಟರ್ ಸಾಫ್ಟ್ಸ್ಟಿಲ್ಸ್ನಲ್ಲಿ ಡಿಪ್ಲೋಮಾ ಪಡೆದಿದ್ದ ಆರೋಪಿ ಸಂಡೂರಿನ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮುಂಬೈನಲ್ಲಿ ಹುಡುಗಿಯೊಬ್ಬಳು ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ಬಳಸಿಕೊಂಡು ಯಾರೋ ತನ್ನನ್ನು ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ದೂರು ದಾಖಲಿಸಿದ ನಂತರ,
ಮಹಾರಾಷ್ಟ್ರ ಸೈಬರ್ ಪೊಲೀಸರು ತನಿಖೆ ಪ್ರಾರಂಭಿಸಿದರು. ತಾಂತ್ರಿಕ ಪುರಾವೆ ಸಂಗ್ರಹಿಸಿ ಬ್ಲ್ಯಾಕ್ಮೇಲರ್ನ ಸ್ಥಳವನ್ನು ಪತ್ತೆಹಚ್ಚಿದ ನಂತರ, ಶುಭಂ ಕುಮಾರ್ ನನ್ನು ಬಂಧಿಸಿ, ನಾಲ್ಕು ಸ್ಮಾರ್ಟ್ಫೋನ್ಗಳು ಮತ್ತು ಕಂಪ್ಯೂಟರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅದರಿಂದ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡೋದೇ ಇವನ ಕೆಲಸವಾಗಿತ್ತು. ಈವರೆಗೂ ಒಟ್ಟು 10 ಕ್ಕೂ ಹೆಚ್ಚು ನಕಲಿ ಖಾತೆಗಳು ಮತ್ತು 90ಕ್ಕೂ ಹೆಚ್ಚು ಇಮೇಲ್ ಐಡಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ತನಿಖೆ ವೇಳೆ, ಮಹಿಳೆಯರಿಗೆ ನಗ್ನವಾಗಿ ವಿಡಿಯೋ ಕರೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ. ಮಹಿಳೆಯರು ಒಪ್ಪದೇ ಇದ್ದಾಗ ನಕಲಿ ಖಾತೆ ಸೃಷ್ಟಿ ಮಾಡಿ, ಮಾನಹಾನಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಆರೋಪಿಯ ಮೊಬೈಲ್ನಿಂದ 13,500 ಮಹಿಳೆಯರ ಅಶ್ಲೀಲ ದೃಶ್ಯಗಳಿರುವ ಸ್ಕ್ರೀನ್ ಶಾಟ್ಗಳನ್ನು ರಿಕವರಿ ಮಾಡಿಕೊಂಡಿದ್ದಾರೆ.