ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2025 ಉದ್ಘಾಟನಾ ಸಮಾರಂಭ ಜರುಗಲಿದೆ.

Advertisement

ಜೂನ್ 19ರ ಬೆಳಿಗ್ಗೆ 9 ಗಂಟೆಗೆ ಸಾಮೂಹಿಕ ಯೋಗ ನಡಿಗೆ ಮುನ್ಸಿಪಲ್ ಆವರಣದಿಂದ ಪ್ರಾರಂಭಗೊಳ್ಳುವುದು. ಜೂನ್ 21ರ ಬೆಳಿಗ್ಗೆ 6.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2025 ಉದ್ಘಾಟನಾ ಸಮಾರಂಭ ಜರುಗುವುದು. ಘನ ಉಪಸ್ಥಿತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಹಿಸುವರು. ಉದ್ಘಾಟನೆಯನ್ನು ಕಾನೂನು, ಮಾನವ ಹಕ್ಕುಗಳು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿ.ಪ ಸದಸ್ಯ ಸಲೀಂ ಅಹ್ಮದ, ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜಿ.ಎಸ್. ಪಾಟೀಲ, ಬಾಗಲಕೋಟ ಸಂಸದ ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯರಾದ ಎಸ್.ವ್ಹಿ. ಸಂಕನೂರ, ಪ್ರದೀಪ ಶೆಟ್ಟರ್, ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಉಪಸ್ಥಿತರಿರುವರು.

ಈ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿಗಳಾದ ಸಿ.ಎನ್. ಶ್ರೀಧರ, ಗದಗ ಜಿ.ಪಂ ಮುಖ್ಯ ಕಾರ್ಯದರ್ಶಿ ಭರತ್ ಎಸ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಉಪಸ್ಥಿತರಿರುವರು. ಗದಗ ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಯಪಾಲಸಿಂಗ ಪಿ.ಸಮೋರೇಕರ ಪತ್ರಿಕಾ ಪ್ರಕಟಣೆಯ ಮೂಲಕ ಸರ್ವರಿಗೂ ಸ್ವಾಗತ ಕೋರಿದ್ದಾರೆ.

 

ವಿಶೇಷ ಆಹ್ವಾನಿತರಾಗಿ ಮಾನ್ಯ ಸರ್ಕಾರದ ಕಾರ್ಯದರ್ಶಿಗಳು, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಬೆಂಗಳೂರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಆಯುಷ್ ನಿರ್ದೇಶನಾಲಯದ ಆಯುಕ್ತರಾದ ವಿಪಿನ್ ಸಿಂಗ್ ಭಾಗವಹಿಸುವರು.


Spread the love

LEAVE A REPLY

Please enter your comment!
Please enter your name here