ಬೆಂಗಳೂರು: ನಗರದ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಾಲ್ಕೈದು ಪೀಸ್ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಜರುಗಿದೆ.
Advertisement
ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ 2 ದಿನದ ಹಿಂದೆ ಇಂಗುಗುಂಡಿ ಸ್ಚಚ್ಛ ಮಾಡುವಾಗ ಅಸ್ಥಿಪಂಜರ ಪತ್ತೆಯಾಗಿದ್ದು, ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಸ್ಥಿಪಂಜರ ಪೀಸ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದ ಅಸ್ಥಿಪಂಜರ ಪೀಸ್ ಗಳನ್ನು FSLಗೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಯುಡಿಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು, ಅಸ್ಥಿಪಂಜರ ಮನುಷ್ಯರದ್ದಾ..? ಪ್ರಾಣಿಯದ್ದಾ? ಎಂದು ಪರಿಶೀಲನೆ ಮಾಡಲಾಗುತ್ತಿದ್ದು, ವರದಿಗಾಗಿ ಕಾಯುತ್ತಿದ್ದಾರೆ.