ಕೊಂಚ ಬಿಡುವು ಕೊಟ್ಟ ಮುಂಗಾರು: ಇಂದಿನಿಂದ ಕರ್ನಾಟಕದಲ್ಲಿ ಕಡಿಮೆಯಾಗಲಿದೆ ಮಳೆ ಅಬ್ಬರ!

0
Spread the love

ಬೆಂಗಳೂರು:- ಇಂದಿನಿಂದ ಮುಂಗಾರು ಅಬ್ಬರ ಕಡಿಮೆ ಆಗಲಿದ್ದು, ಕರ್ನಾಟಕದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ. ಆದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಕೆಲವೆಡೆ ಮಳೆಯಾಗಿದ್ದು, ಗುರುವಾರ ಮೋಡಕವಿದ ವಾತಾವರಣವಿದ್ದರೂ ಸ್ವಲ್ಪ ಬಿಸಿಲು ಕೂಡ ಇದೆ. ಎಚ್​​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here