ಟೈಯರ್ ಬ್ಲಾಸ್ಟ್.. ಡಿವೈಡರ್’ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಇಬ್ಬರಿಗೆ ಗಾಯ – ಭೀಕರ ಅಪಘಾತದ ದೃಶ್ಯ CCTVಯಲ್ಲಿ ಸೆರೆ

0
Spread the love

ತುಮಕೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಎಂ.ಜಿ ಸರ್ಕಲ್ ನಲ್ಲಿ ತಡರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

Advertisement

ಮಾರುತಿ ಸುಜುಕಿ ಬೊಲೆನೋ ಕಾರಿನಲ್ಲಿ ಬರುತ್ತಿದ್ದ ವೇಳೆ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದಲ್ಲದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಗಮೋಹನ ರೆಡ್ಡಿ ಹಾಗೂ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಆದ್ರೆ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೂ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here