ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ!

0
Spread the love

ನವದೆಹಲಿ:- ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ಸ್ಥಳೀಯ ಭಾಷೆಗಳು ಭಾರತದ ಗುರುತಿನ ಕೇಂದ್ರವಾಗಿದ್ದು, ವಿದೇಶಿ ಭಾಷೆಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು ಎಂದು ಒತ್ತಿ ಹೇಳಿದ್ದಾರೆ.

Advertisement

ಈ ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ಅಂತಹ ಸಮಾಜದ ಸೃಷ್ಟಿಯು ದೂರವಿಲ್ಲ. ನಮ್ಮ ದೇಶದ ಭಾಷೆಗಳು ನಮ್ಮ ಸಂಸ್ಕೃತಿಯ ರತ್ನಗಳು ಎಂದು ನಾನು ನಂಬುತ್ತೇನೆ. ನಮ್ಮ ಭಾಷೆಗಳಿಲ್ಲದೆ, ನಾವು ನಿಜವಾದ ಭಾರತೀಯರಾಗುವುದಿಲ್ಲ ಎಂದಿದ್ದಾರೆ. ಭಾರತದ ಭಾಷಾ ಪರಂಪರೆಯನ್ನು ಮರಳಿ ಪಡೆಯಲು ದೇಶಾದ್ಯಂತ ನವೀಕೃತ ಪ್ರಯತ್ನಕ್ಕೆ ಕರೆ ನೀಡಿದರು. ಪ್ರಪಂಚದಾದ್ಯಂತ ವಸಾಹತುಶಾಹಿ ಗುಲಾಮಗಿರಿಯ ಸಂಕೇತವಾಗಿ ಇಂಗ್ಲಿಷ್ ಅನ್ನು ತಿರಸ್ಕರಿಸಲಾಗುವುದು ಎಂದು ನುಡಿದಿದ್ದಾರೆ.

ನಮ್ಮ ದೇಶ, ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ಅರ್ಥಮಾಡಿಕೊಳ್ಳಲು ಯಾವುದೇ ವಿದೇಶಿ ಭಾಷೆ ಸಾಕಾಗುವುದಿಲ್ಲ. ಅರೆಬೆಂದ ವಿದೇಶಿ ಭಾಷೆಗಳ ಮೂಲಕ ಸಂಪೂರ್ಣ ಭಾರತದ ಕಲ್ಪನೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here