ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಇಂದು ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದರು. ಅವಧಿ ಮೀರಿ ಕಾರ್ಯಾಚರಿಸುತ್ತಿರುವುದು, ಯುವತಿಯರಿಂದ ಅಶ್ಲೀಲ ನೃತ್ಯ ಮಾಡಿಸುತ್ತಿರುವುದೂ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಕಾರಣ ದಾಳಿ ನಡೆದಿದೆ.
Advertisement
ಬೆಂಗಳೂರು ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್ಗಳ ಮೇಲೂ ದಾಳಿ ನಡೆದಿದೆ. ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ.ಪಾರ್ಕ್, ಉಪ್ಪಾರಪೇಟೆ ಸೇರಿ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ ಬಾರ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.