ಪುರುಲಿಯಾ: ಬೊಲೆರೊ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ. ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18 ರಲ್ಲಿ ಎಲ್ಲರೂ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
Advertisement
ಮೃತರು ಪುರುಲಿಯಾದ ಬರಾಬಜಾರ್ ಪೊಲೀಸ್ ಠಾಣೆ ಪ್ರದೇಶದ ಅಡಬಾನಾ ಗ್ರಾಮದಿಂದ ಜಾರ್ಖಂಡ್ನ ನಿಮ್ದಿಹ್ ಪೊಲೀಸ್ ಠಾಣೆ ಪ್ರದೇಶದ ತಿಲೈತಾಂಡ್ಗೆ ಬೊಲೆರೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು,
ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ಎಲ್ಲಾ ಪ್ರಯಾಣಿಕರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.