ಹೊಸ ನಾಯಕ ಶುಭಮಾನ್ ಗಿಲ್ ಸಾರಥ್ಯದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಭಾರತ ತಂಡ ಸಜ್ಜಾಗಿದ್ದು, ಇಂದಿನಿಂದ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ ಈಗಾಗಲೇ ತನ್ನ ಪ್ಲೇಯಿಂಗ್ 11 ಪ್ರಕಟಿಸಿದ್ದು,
ತಂಡದಲ್ಲಿ ಯಾರೆಲ್ಲ ಆಡಲಿದ್ದಾರೆ ಎಂಬುದು ಈಗಾಗಲೇ ಖಚಿತವಾಗಿತ್ತು. ಇದೀಗ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ತಂಡದ ಪರ ಸಾಯಿ ಸುದರ್ಶನ್ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದಾರೆ.
ಕನ್ನಡಿಗ ಕರುಣ್ ನಾಯರ್ಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಇನ್ನೊಂದು ವಿಶೇಷವೆಂದರೆ, ಈ ಸರಣಿಯ ಹೆಸರನ್ನು ಬದಲಿಸಲಾಗಿದೆ. ಇದುವರೆಗೆ ಈ ಸರಣಿಗೆ ಪಟೌಡಿ ಎಂದು ಕರೆಯಲಾಗುತ್ತಿತ್ತು. ಇದೀಗ ಈ ಟ್ರೋಫಿ ಹೆಸರನ್ನು ಬದಲಿಸಲಾಗಿದ್ದು, ಆಂಡರ್ಸನ್- ತೆಂಡೂಲ್ಕರ್ ಟ್ರೋಫಿ ಎಂದು ಮರು ನಾಮಕರಣ ಮಾಡಲಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿಕೀ), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್ (ಪ್ಲೇಯಿಂಗ್ XI): ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಜೇಮೀ ಸ್ಮಿತ್(ವಿಕೀ), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್