ಹಾಸನ:– ಬೆಂಗಳೂರು-ಮುರುಡೇಶ್ವರ ರೈಲು ಸ್ಥಗಿತಗೊಂಡಿದೆ. ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ.
Advertisement
ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.