ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ: ಪ್ರಧಾನಿ ಮೋದಿ

0
Spread the love

ವಿಶಾಖಪಟ್ಟಣಂ: ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ವಿಶಾಖಪಟ್ಟಣಂನ ಆರ್‌.ಕೆ ಬೀಚ್ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ.

Advertisement

ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದರು.

ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. ಯೋಗ ಹಲವು ದೇಶಗಳ ಜೊತೆ ಬಾಂಧವ್ಯ ವೃದ್ಧಿಗೆ ನೆರವಾಗಿದೆ. ನೌಕಾಪಡೆ ಸಿಬ್ಬಂದಿ ನೌಕೆಯಲ್ಲೇ ಯೋಗಾಸನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಕೂಡ ಯೋಗಾಸನ ಮಾಡಬೇಕು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here