ಹಿಂದೂ ಮುಖಂಡ ಶ್ರೀಕಾಂತ್‌ ಶೆಟ್ಟಿಗೆ ಶಾಕ್: 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ!

0
Spread the love

ಬಾಗಲಕೋಟೆ: ಹಿಂದೂ ಮುಖಂಡ ಶ್ರೀಕಾಂತ್‌ ಶೆಟ್ಟಿಗೆ ಶಾಕ್ ಎದುರಾಗಿದ್ದು, 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿ ಸದಸ್ಯ ಶ್ರೀಕಾಂತ್ ಶೆಟ್ಟಿ ಅವರಿಗೆ ಮೂರು ತಿಂಗಳು ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

Advertisement

ಹಿಂದೂ ಹೃದಯ ಸಾಮ್ರಾಟ ಶ್ರೀ ಛತ್ರಪತಿ ಶಿವಾಜಿ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮವನ್ನು ಮುಧೋಳದಲ್ಲಿರುವ ಶಿವಾಜಿ ನಗರದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಮುಖ್ಯ ಭಾಷಣಕಾರರಾಗಿ ಶ್ರೀಕಾಂತ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು.

ಭಾಷಣ ಮೂಲಕ ಕೋಮು ಸಾಮರಸ್ಯ ಕದಡುವ ಸಾಧ್ಯತೆ ಇರುವ ಕಾರಣ ನೀಡಿ ಜಿಲ್ಲಾಡಳಿತ ಶ್ರೀಕಾಂತ ಶೆಟ್ಟಿ ಅವರಿಗೆ 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಪ್ರಕಟಿಸಿದೆ.


Spread the love

LEAVE A REPLY

Please enter your comment!
Please enter your name here