HomeBengaluru Newsಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

ಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

For Dai;y Updates Join Our whatsapp Group

Spread the love

ಬೆಂಗಳೂರು:- 168 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಪೈಲಟ್ ಗಳು ಮೇಡೇ ಘೋಷಿಸಿದ ಹಿನ್ನೆಲೆ ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪೈಲಟ್‌ಗಳು ‘ಮೇಡೇ’ ಎಂದು ಘೋಷಿಸಿದ ನಂತರ ಗುವಾಹಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಗುರುವಾರ ರಾತ್ರಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. “ಮೇಡೇ ಕರೆ ಬಂದ ನಂತರ, ಎಟಿಸಿ ವಿಮಾನ ನಿಲ್ದಾಣದ ಸಿಬ್ಬಂದಿಗೆ ಎಚ್ಚರಿಕೆ ನೀಡಿತು, ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ಇಂಡಿಗೋ ವಿಮಾನವು ಗುರುವಾರ ರಾತ್ರಿ 8.20ಕ್ಕೆ ಸುರಕ್ಷಿತವಾಗಿ ಇಳಿಯಿತು” ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಇಂಧನದ ಪರೀಕ್ಷೆ ಮಾಡಿಕೊಳ್ಳದೆ ಹಾರಾಟಕ್ಕೆ ಮುಂದಾಗಿದ್ದಕ್ಕೆ ಆ ವಿಮಾನದ ಇಬ್ಬರಯ ಪೈಲಟ್​​ಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ ಇಂಡಿಗೋ ಇದನ್ನು ಅಧಿಕೃತಪಡಿಸಿಲ್ಲ.

ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಡ್ರೀಮ್‌ಲೈನರ್ ವಿಮಾನವು ಕೆಲವು ದಿನಗಳ ಹಿಂದೆ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿತ್ತು. ಆ ವೇಳೆ ಕೂಡ ಪೈಲಟ್ ಮೇಡೇ ಘೋಷಿಸಿದ್ದರು. ಆದರೆ, ಅದಕ್ಕೆ ಪ್ರತಿಕ್ರಿಯಿಸುವ ಮುನ್ನ ವಿಮಾನ ಅಪಘಾತಕ್ಕೀಡಾಗಿತ್ತು. ಅದಾದ ಕೇವಲ ಒಂದು ವಾರದ ನಂತರ ಈ ಘಟನೆ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!