ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರ ಸ್ಥಾಪನೆ: ದಿನೇಶ್​ ಗುಂಡೂರಾವ್​!

0
Spread the love

ಬೆಂಗಳೂರು:- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರ ಸ್ಥಾಪನೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಸ್ಥಾಪನೆ ಮಾಡಲಾಗುತ್ತದೆ.

Advertisement

ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


Spread the love

LEAVE A REPLY

Please enter your comment!
Please enter your name here