ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಭಾರೀ ಮಳೆ ಹಿನ್ನೆಲೆ ಕರ್ನಾಟಕದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here