ಹಾಸನ:- ನಗರದ ಸತ್ಯಮಂಗಲ ಬಡಾವಣೆಯಲ್ಲಿ ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. 35 ವರ್ಷದ ಚೇತನ್ ಮೃತ ವ್ಯಕ್ತಿ. ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
Advertisement
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.