ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ!

0
Spread the love

ಬೆಳಗಾವಿ:- ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ. 24 ವರ್ಷದ ಯಾಸೀರ್ ಜಾತಗಾರ ಕೊಲೆಯಾದ ಯುವಕ. ರೋಹಿತ್ ಕೊಲೆ ಮಾಡಿದ ಆರೋಪಿ ಆಗಿದ್ದು, ಪೊಲೀಸರಿಗೆ ಶರಣಾಗಿದ್ದಾನೆ.

Advertisement

ಸ್ಥಳಕ್ಕೆ ಎಸ್​ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಯಾಸೀರ್​ನನ್ನ ರೋಹಿತ್ ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆಯಿಂದ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

LEAVE A REPLY

Please enter your comment!
Please enter your name here