ವಿಜಯಪುರ:– ಜಿಲ್ಲೆಯ ಆಲಮೇಲ ಪಟ್ಟಣದ ನಾಗರಹಳ್ಳಿ ರಸ್ತೆಯ ಜಮೀನಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. 26 ವರ್ಷದ ಫಾರುಕ್ ಲಾಳಸಂಗಿ ಕೊಲೆಯಾದ ಯುವಕ.
ಅನೈತಿಕ ಸಂಬಂಧ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



