ಬೆಂಗಳೂರು: ಐಶ್ವರ್ಯಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆ ಇಂದು ಡಿಕೆ ಸುರೇಶ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಇ.ಡಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು.
Advertisement
ಆದರೆ ಇಂದು ಹಾಜರಾಗುವುದಾಗಿ ಡಿ.ಕೆ.ಸುರೇಶ್ ತಿಳಿಸಿದ್ದರು. ಇನ್ನೂ ಬಮೂಲ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡಿ.ಕೆ.ಸುರೇಶ್ ಅವರೊಂದಿಗೆ ಬೆಂಬಲಿಗರು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಶಾಂತಿನಗರದ ಇ.ಡಿ ಕಚೇರಿ ಬಳಿ 50 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.